ನವದೆಹಲಿ: ಇನ್ಮುಂದೆ 5ರಿಂದ 8ನೇ ತರಗತಿ ವರೆಗೆ ವಿದ್ಯಾರ್ಥಿಗಳನ್ನು ಕಡ್ಡಾಯ ಉತ್ತೀರ್ಣ ಮಾಡುವ ನೀತಿಯನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ನೋ ಡಿಟೆನ್ಶನ್ ಪಾಲಿಸಿಯಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಹಲವು ರಾಜ್ಯಗಳು ಆತಂಕ ವ್ಯಕ್ತಪಡಿಸಿವೆ. ಹೀಗಾಗಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂಬ ಸುಳಿವು ನೀಡಿದ್ದಾರೆ.