ಗ್ರೀಸ್ ಬಿಕ್ಕಟ್ಟು: 28 ಸಾವಿರ ಅಂಶಗಳಿಗಿಂತ ಕೆಳಗಿಳಿದ ಸೂಚ್ಯಂಕ

ಸೋಮವಾರ, 6 ಜುಲೈ 2015 (14:47 IST)
ಗ್ರೀಸ್ ದೇಶದ ಆರ್ಥಿಕ ಬಿಕ್ಕಟ್ಟಿನ ಪ್ರಭಾವ ದೇಶದ ಶೇರುಪೇಟೆಯ ಮೇಲೆ ಬೀರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡಿದೆ.
 
ಆದರೆ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿಕೆಯಿಂದಾಗಿ ಮತ್ತಷ್ಟು ಕುಸಿತವಾಗುವುದು ತಡೆದಂತಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.  
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.2 ರಷ್ಟು ಕುಸಿತ ಕಂಡು 28 ಸಾವಿರ ಗಡಿಯೊಳಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 98.75 ಪಾಯಿಂಟ್‌ಗಳ ಇಳಿಕೆ ಕಂಡು 8386.15 ಅಂಕಗಳಿಗೆ ತಲುಪಿದೆ.
 
ತೈಲ ಮತ್ತು ಅನಿಲ, ಎಫ್‌ಎಂಸಿಜಿ, ಹೆಲ್ತ್‌ಕೇರ್ ಮತ್ತು ರಿಯಲ್ಟಿ ಶೇರುಗಳ ಖರೀದಿಗೆ ಹೂಡಿಕೆದಾರರು ನಿರಾಸಕ್ತಿ ತೋರಿದ್ದರಿಂದ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.
 

ವೆಬ್ದುನಿಯಾವನ್ನು ಓದಿ