ಕೇಂದ್ರ ಸಚಿವರ ನಿವಾಸಕ್ಕೆ ಗ್ರೆನೇಡ್ ದಾಳಿ

ಶುಕ್ರವಾರ, 30 ಡಿಸೆಂಬರ್ 2016 (08:49 IST)
ಕೇಂದ್ರ ಸಚಿವ ರಾಜನ್ ಗೊಹನ್ ಅವರ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದೆ. 

ಗುವಾಹಟಿಯ ನಗಾವನ್ ಪಟ್ಟಣದಲ್ಲಿರುವ ಸಚಿವರ ನಿವಾಸದ ಮೇಲೆ  ದಾಳಿ ನಡೆದಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ. 
 
ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಏಕಾಏಕಿ ಸಚಿವರ ಮನೆಯ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಆದರೆ ಅದೃಷ್ಟವಶಾತ್ ಅದು ಸ್ಪೋಟಗೊಂಡಿಲ್ಲವಾದ್ದರಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
 
ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿ ಗ್ರೆನೇಡ್‌ನ್ನು ನಿಷ್ಕ್ರಿಯಗೊಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಸಚಿವರ ಕುಟುಂಬ ಅಲ್ಲಿರಲಿಲ್ಲ. ಕೇವಲ ಭದ್ರತಾ ಸಿಬ್ಬಂದಿ ಮಾತ್ರ ಇದ್ದರೆಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ