ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಬುಧವಾರ, 25 ಅಕ್ಟೋಬರ್ 2017 (13:12 IST)
ಕೇಂದ್ರ ಚುನಾವಣೆ ಆಯೋಗ ಇಂದು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದೆ. ಗುಜರಾತ್ ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯಲಿದೆ ಎಂದು ಚುನಾವಣೆ ಆಯುಕ್ತ ಎ.ಕೆ.ಜ್ಯೋತಿ ತಿಳಿಸಿದ್ದಾರೆ.
182 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಚುನಾವಣೆ ಡಿಸೆಂಬರ್ 9 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 14 ರಂದು ನಡೆಯಲಿದೆ. ಡಿಸೆಂಬರ್ 18 ರಂದು ಮತದಾನ ಏಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
 
ರಾಜ್ಯದಲ್ಲಿ ಒಟ್ಟು 4.30 ಕೋಟಿ ಮತದಾರರಿದ್ದು 50 128 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪಿಎಟಿ ಮತಯಂತ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
 
ದೇಶದ ಚುನಾವಣೆ ಇತಿಹಾಸದಲ್ಲಿಯೇ ಗುಜರಾತ್ ವಿಧಾನಸಭೆ ಚುನಾವಣೆ ಭಾರಿ ಗಮನ ಸೆಳೆದಿದ್ದು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.
 
ಕಳೆದ 22 ವರ್ಷಗಳಿಂದ ಅಧಿಕಾರದಿಂದ ದೂರವಿರುವ ಕಾಂಗ್ರೆಸ್ ಈ ಬಾರಿ ನಮ್ಮದೇ ಸರಕಾರ ಎನ್ನುವ ರೀತಿಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದೆ. 
 
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ, ಗುಜರಾತ್ ರಾಜ್ಯದ ವಿಧಾನಸಭೆ ಚುನಾವಣೆಯನ್ನು ನಂತರ ಘೋಷಿಸುವುದಾಗಿ ಪ್ರಕಟಿಸಿ ವಿವಾದಕ್ಕೆ ಕಾರಣವಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ