ನಾಳೆ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆ

ಮಂಗಳವಾರ, 24 ಅಕ್ಟೋಬರ್ 2017 (15:23 IST)
ನಾಳೆ ಕೇಂದ್ರ ಚುನಾವಣೆ ಆಯೋಗ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ದೇಶದ ಚುನಾವಣೆ ಇತಿಹಾಸದಲ್ಲಿಯೇ ಗುಜರಾತ್ ವಿಧಾನಸಭೆ ಚುನಾವಣೆ ಭಾರಿ ಗಮನ ಸೆಳೆದಿದ್ದು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.
 
ಕಳೆದ 22 ವರ್ಷಗಳಿಂದ ಅಧಿಕಾರದಿಂದ ದೂರವಿರುವ ಕಾಂಗ್ರೆಸ್ ಈ ಬಾರಿ ನಮ್ಮದೇ ಸರಕಾರ ಎನ್ನುವ ರೀತಿಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದೆ. 
 
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ, ಗುಜರಾತ್ ರಾಜ್ಯದ ವಿಧಾನಸಭೆ ಚುನಾವಣೆಯನ್ನು ನಂತರ ಘೋಷಿಸುವುದಾಗಿ ಪ್ರಕಟಿಸಿ ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ