ಗುಜರಾತ್ ನಲ್ಲಿ ಅತಂತ್ರ ಸ್ಥಿತಿ ಬಂದರೆ ಏನಾಗುತ್ತದೆ?

ಸೋಮವಾರ, 18 ಡಿಸೆಂಬರ್ 2017 (09:37 IST)
ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಮತದಾರ ಬಿಜೆಪಿಗೆ ಮತದಾರ ಕೈಕೊಟ್ಟಂತೆ ಕಾಣಿಸುತ್ತಿದೆ. ಆದರೆ ಕಾಂಗ್ರೆಸ್ ಗೆ ಮುನ್ನಡೆಯಿದ್ದರೂ, ಸ್ಪಷ್ಟ ಬಹುಮತ ಸಾಧ್ಯತೆ ಕಾಣುತ್ತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಏನಾಗುತ್ತದೆ?
 

ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಇಲ್ಲಿ ಇತರ ರಾಜ್ಯಗಳಂತೆ ಮೈತ್ರಿ ಸರ್ಕಾರ ಸಾಧ್ಯತೆಯಿಲ್ಲ. ಯಾಕೆಂದರೆ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬಿಟ್ಟರೆ ಬೇರೆ ಪಕ್ಷಗಳಿಲ್ಲ. ಇತರರು ಕೆಲವೇ ಸ್ಥಾನಗಳಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಒಂದಾಗುವ ಸಾಧ್ಯತೆಯೇ ಇಲ್ಲ.

ಹೀಗಿರುವಾಗ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮತ್ತೆ ಆಪರೇಷನ್ ಕಮಲ, ಆಪರೇಷನ್ ಹಸ್ತ ಕಂಡುಬರುವ ಸಾಧ್ಯತೆಯಿದೆ. ಇಲ್ಲವಾದರೆ ರಾಷ್ಟ್ರಪತಿ ಆಳ್ವಿಕೆ ಬರಬಹುದು. ಮತ್ತೆ ಚುನಾವಣೆ ಹೇರಬೇಕಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ