ಪತ್ನಿಗೆ ಹನಿಮೂನ್‌ನಲ್ಲೇ ಲೈಂಗಿಕ ಕಿರುಕುಳ: ಪತಿ ಅರೆಸ್ಟ್

ಶನಿವಾರ, 2 ಡಿಸೆಂಬರ್ 2023 (13:53 IST)
ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತಿಯೊಂದಿಗೆ ಬ್ಯಾಂಕಾಂಕ್ ಮತ್ತು ಥೈಲೆಂಡ್‌ಗೆ ಹನಿಮೂನ್‌ಗಾಗಿ ತೆರಳಿದ್ದಾಗ, ಕ್ರೂರವಾಗಿ ಅತ್ಯಾಚಾರವೆಸಗಿದ್ದಲ್ಲದೇ ಮುಖ ಮೈಥುನ ನಡೆಸುವಂತೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನವ ವಧು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
 
23 ವರ್ಷ ವಯಸ್ಸಿನ ಮಹಿಳೆ ನಿನ್ನೆ ರಾತ್ರಿ ತನ್ನ ಕುಟುಂಬದೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಪತಿ ಪುನೀತ್ ಭಾರಧ್ವಾಜ್ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾಳೆ.
 
ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯನ್ನು ]ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ