ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ 873 ಸ್ಪರ್ಧಿಗಳು ಕಣಕ್ಕಿಳಿದಿದ್ದರು. ಈ ಬಾರಿ ಶೇ.63.45 ರಷ್ಟು ಮತದಾನವಾಗಿದ್ದು ವಿಶೇಷ. ಈ ಬಾರಿ ಇಲ್ಲಿ ಅತಂತ್ರ ಪರಿಸ್ಥಿತಿ ಬರುವ ಸಾಧ್ಯತೆಯಿರುವುದರಿಂದ ಬಿಜೆಪಿ ಈಗಾಗಲೇ ಪಕ್ಷೇತರರೊಂದಿಗೆ ಮಾತುಕತೆ ಶುರು ಮಾಡಿದೆ. ಇನ್ನು ಹರ್ಯಾಣದಲ್ಲಿ 90 ಕ್ಷೇತ್ರಗಳಲ್ಲಿ ಮತದಾನವಾಗಿದೆ. ಕಳೆದ 10 ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಈ ಬಾರಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ.
ಇನ್ನು, ಜಮ್ಮು ಕಾಶ್ಮೀರದಲ್ಲಿ ಈ ಬಾರಿ ಅತಂತ್ರ ಸ್ಥಿತಿಯಾದರೂ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನೆರವಿನಿಂದ ಕಾಂಗ್ರೆಸ್ ಅಧಿಕಾರಕ್ಕೇರಬಹುದಾಗಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿತ್ತು. ಹೀಗಾಗಿ ಇಲ್ಲಿಯೂ ಈ ಬಾರಿ ತಮ್ಮದೇ ಸರ್ಕಾರ ಬರಬಹುದು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಇನ್ನು ಕೆಲವೇ ಹೊತ್ತಿನಲ್ಲಿ ಫಲಿತಾಂಶ ತಿಳಿದುಬರಲಿದೆ.