ಹರಿಯಾಣಾ: ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಕಟ್ಟರ್ ಪ್ರಮಾಣ ವಚನ

ಭಾನುವಾರ, 26 ಅಕ್ಟೋಬರ್ 2014 (10:53 IST)
ಹರ್ಯಾಣ ಮುಖ್ಯಮಂತ್ರಿಯಾಗಿ ಮನೋಹರ್‌ ಲಾಲ್‌ ಖಟ್ಟರ್‌ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. 
 
ಪಂಚಕುಲ ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರು, ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. 
 
ಪಂಜಾಬ್‌ ಸಿಎಂ ಪ್ರಕಾಶ್‌ ಸಿಂಗ್‌ ಬಾದಲ್‌ ಸಹ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ. ಹರ್ಯಾಣದ ನಿರ್ಗಮಿತ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೂ ಆಹ್ವಾನ ನೀಡಲಾಗಿದೆೆ. 
 

ವೆಬ್ದುನಿಯಾವನ್ನು ಓದಿ