ಬಸ್‌ನಲ್ಲಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಸಬ್‌-ಇನ್ಸಪೆಕ್ಟರ್ ಅರೆಸ್ಟ್

ಭಾನುವಾರ, 24 ಜುಲೈ 2016 (16:49 IST)
ಬಸ್‌ನಲ್ಲಿ ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇಲೆ ಕಿರಿಯ ಪೊಲೀಸ್ ಅಧಿಕಾರಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 
 
ಆರೋಪಿ ಪೊಲೀಸ್ ಸಬ್ ಇನ್ಸೆಪೆಕ್ಟರ್ ರಾಮ್‌ಲಾಲ್ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ನೋಡಿದ ಸಹಪ್ರಯಾಣಿಕರು ಆತನನ್ನು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
 
ಬಸ್‌ನಲ್ಲಿರುವ ಪ್ರಯಾಣಿಕರು ಬಸ್ಸನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗುವಂತೆ ಚಾಲಕನಿಗೆ ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
 
ಮಗುವನ್ನು ತನ್ನ ತೊಡೆಯ ಮೇಲೆ ಕುರಿಸಿಕೊಳ್ಳುವುದಾಗಿ ಹೇಳಿದ್ದ ಪೊಲೀಸ್ ಅಧಿಕಾರಿ ನಂತರ ಮಗುವಿಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಪಕ್ಕದಲ್ಲಿ ಕುಳಿತ ದಂಪತಿಗಳು ಆತನ ವರ್ತನೆಯಿಂದ ಆಕ್ರೋಶಗೊಂಡು ಇತರ ಪ್ರಯಾಣಿಕರನ್ನು ನೆರವಿಗೆ ಕರೆದು ಪೊಲೀಸ್ ಅಧಿಕಾರಿಯ ವರ್ತನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಕೂಡಾ ಅಳಲು ಆರಂಭಿಸಿದೆ.ಎಲ್ಲಾ ಪ್ರಯಾಣಿಕರು ಸೇರಿ ಪೊಲೀಸ್ ಅಧಿಕಾರಿಯನ್ನು ಮನಬಂದಂತೆ ಥಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ