ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

Krishnaveni K

ಗುರುವಾರ, 4 ಸೆಪ್ಟಂಬರ್ 2025 (12:21 IST)

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ ಟಿ ಕಡಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು ಇದು ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ಎಂದಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ #GST ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು #ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ.

ಹೊಸ ಸುಧಾರಣೆಯೊಂದಿಗೆ GST ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ MSMEಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ.


ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ’ ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ