ನವದೆಹಲಿ: ಮೋದಿ 3.0 ಸರ್ಕಾರದ ನೂತನ ಲೋಕಸಭೆ ಕಲಾಪದಲ್ಲಿ ಇಂದು ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ಈ ವೇಳೆ ಮಂಡ್ಯದಿಂದ ಆಯ್ಕೆಯಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡಾ ನೂತನ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಸಭೆಯಲ್ಲಿ ಇಂದು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಭ್ರಾರ್ತೃಹರಿ ಅಧ್ಯಕ್ಷತೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ಅದರಂತೆ ಮಡ್ಯ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾದ ಎಚ್ ಡಿ ಕುಮಾರಸ್ವಾಮಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಮ್ಮ ಹೆಸರು ಕೂಗುತ್ತಿದ್ದಂತೇ ಪ್ರಧಾನಿ ಮೋದಿ, ನಿತಿನ್ ಗಡ್ಕರಿ, ಅಮಿತ್ ಶಾ ಅವರಿಗೆ ಕೈ ಮುಗಿದು ಸ್ಪೀಕರ್ ಪೀಠದತ್ತ ನಡೆದ ಕುಮಾರಸ್ವಾಮಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಎಂಬವನಾದ ನಾನು ಎಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.
ಈ ಬಾರಿ ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿಯೂ ಅಧಿಕಾರಕ್ಕೇರಿರುವುದು ವಿಶೇಷ.