ಒಂದು ತಿಂಗಳು ಗಡುವು ಕೊಟ್ಟ ಹೆಚ್ಡಿಕೆ?

ಶುಕ್ರವಾರ, 1 ಏಪ್ರಿಲ್ 2022 (08:40 IST)
ಬೆಂಗಳೂರು : ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ,

ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಜೆಪಿ ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಸರ್ವ ಜನಾಂಗದ ಶಾಂತಿಯ ತೋಟ – ಕರ್ನಾಟಕ ಒಂದು ಭಾವೈಕ್ಯ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರ್ಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ.

ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ