ಶ್ರೀಮಂತ ಹುಡುಗಿಯ ಜತೆ ಸಂಬಂಧ ಬೆಳೆಸಿದ್ದೆ ಈತನಿಗೆ ಮುಳುವಾಯ್ತು!
ಸೋಮವಾರ, 28 ಡಿಸೆಂಬರ್ 2020 (11:04 IST)
ಪಾಲಕ್ಕಾಡ್ : 27 ವರ್ಷದ ವ್ಯಕ್ತಿಯನ್ನು ಪತ್ನಿಯ ಸಂಬಂಧಿಕರು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಶ್ರೀಮಂತ ಕುಟುಂಬದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದನು. ಈ ಬಗ್ಗೆ ಆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಆತ ಆ ಹುಡುಗಿಯನ್ನು ವಿವಾಹವಾಗಿದ್ದಾನೆ. ಇದರಿಂದ ಕೋಪಗೊಂಡ ಪತ್ನಿಯ ತಂದೆ ಹಾಗೂ ಚಿಕ್ಕಪ್ಪ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆತ ಮೃತಪಟ್ಟಿದ್ದಾನೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.