ಕುಟುಂಬಸ್ಥರ ಮುಂದೆಯೇ ಬಾಲಕಿಯ ಮೇಲೆ ಅಟ್ಟಹಾಸ ಮೆರೆದ ದುಷ್ಕರ್ಮಿಗಳು

ಬುಧವಾರ, 24 ಅಕ್ಟೋಬರ್ 2018 (09:35 IST)
ಮುಜಾಫರ್ ಪುರ್ : ಬಿಹಾರದ ಮುಜಾಫರ್ ಪುರ್ ದ ಮನೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರ ಮುಂದೆಯೇ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಕಾರ್ಟೂನ್​ ಪ್ಯಾಕ್ಟರಿ ಮಾಲೀಕ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಬಾಲಕಿ ಮನೆಯೊಳಗೆ ನುಗ್ಗಿದ್ದು, ಮನೆಮಂದಿಯನ್ನು ಹಿಗ್ಗಾಮುಗ್ಗಾ ಥಳಿಸಿ, ಕೈಕಾಲನ್ನು ಹಗ್ಗದಿಂದ ಕಟ್ಟಿ ನಂತರ ಅಲ್ಲೇ ಇದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

 

ಈ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ