ವಿಕಲಚೇತನಳ ಮೇಲೆ ಗ್ಯಾಂಗ್ ರೇಪ್
ಯುವತಿಗೆ ಮಾತು ಮತ್ತು ಕಿವಿ ಕೇಳಿಸುವುದಿಲ್ಲ. ಇತ್ತೀಚೆಗೆ ಕೆಳ ಹೊಟ್ಟೆ ನೋವು ಮತ್ತು ರಕ್ತಸ್ರಾವ ಸಮಸ್ಯೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ ಆಕೆ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿತ್ತು. ಬಳಿಕ ಆಕೆಗೆ ಗರ್ಭಪಾತವಾಗಿದೆ.
ಈ ವಿಚಾರವನ್ನು ವೈದ್ಯರು ಪೊಲೀಸರಿಗೆ ತಿಳಿಸಿದ್ದರು. ಅದರಂತೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.