ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ !
ಬೆಂಕಿ ಹೊತ್ತಿಕೊಳ್ಳು ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ 7 ಮಂದಿಗೆ ಗಾಯಗಳಾಗಿದ್ದು, ಅವರನ್ನು ನಗರದ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ 7 ಜನರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವೇ ದಿನಗಳ ಹಿಂದೆ ದೆಹಲಿಯ ಮುಂಡ್ಕಾದಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಆ ಘಟನೆಯಲ್ಲಿ 27 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದರು.