ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

Sampriya

ಗುರುವಾರ, 24 ಜುಲೈ 2025 (16:49 IST)
Photo Credit X
ತಿರುವನಂತಪುರಂ: ಇಂದಿನಿಂದ ಜುಲೈ 28ರ ವರೆಗೆ ಕೇರಳ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. 

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಆಧಾರದ ಮೇಲೆ ನಾಲ್ಕು ದಿನ ಕೇರಳದಲ್ಲಿ ಗಾಲಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆ ನಡೆಸದಂತೆ ಅಲ್ಲದೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಇದರ ಜೊತೆಗೆ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ(IMD) ಮತ್ತು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಜಂಟಿಯಾಗಿ ಮುನ್ಸೂಚನೆಯನ್ನು ಹೊರಡಿಸಿದ್ದು ಅದರ ಮಾಹಿತಿಯಂತೆ ಜುಲೈ 28 ರ ಭಾನುವಾರದವರೆಗೆ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ