ಮಹಾರಾಷ್ಟ್ರ ಸಿಎಂ ಫಡ್ನವಿಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಗುರುವಾರ, 25 ಮೇ 2017 (12:43 IST)
ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಸಂಗಡಿಗರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟ್ ಲಾತೂರ್ ಬಳಿ ಅಪಘಾತಕ್ಕೀಡಾಗಿದೆ.

 
ಅದೃಷ್ಟವಶಾತ್ ಸಿಎಂ ಮತ್ತು ಇತರ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ. ತಕ್ಷಣ ಪೈಲಟ್ ಹೆಲಿಕಾಪ್ಟರ್ ನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಕಾರಣ ಹೆಚ್ಚಿನ ದುರಂತ ಸಂಭವಿಸಿಲ್ಲ.

ಆದರೆ ಘಟನೆಗೆ ನಿಖರ ಕಾರಣವೇನೆಂದು ಇನ್ನಷ್ಟೇ ತಿಳಿದುಬರಬೇಕಿದೆ. ನಾನು ಮತ್ತು ನನ್ನ ಟೀಂ ಸುರಕ್ಷಿತವಾಗಿದೆ ಎಂದು ಸಿಎಂ ಫಡ್ನವಿಸ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ