ಪಾಕಿಸ್ತಾನ ಕಲಾವಿದರನ್ನು ಹೊಗಳಿದ ಬಿಜೆಪಿ ಸಂಸದೆ ಹೇಮಾಮಾಲಿನಿ
ಗುರುವಾರ, 6 ಅಕ್ಟೋಬರ್ 2016 (16:19 IST)
ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಹೇರಬೇಕು ಎನ್ನುವ ಕೂಗು ದೇಶಾದ್ಯಂತ ಪ್ರತಿಧ್ವನಿಸುತ್ತಿರುವ ಮಧ್ಯೆ, ಪಾಕ್ ಕಲಾವಿದರ ಕಾರ್ಯವೈಖರಿಯನ್ನು ಹೊಗಳಿ ಬಿಜೆಪಿ ಸಂಸದೆ ಹೇಮಾಮಾಲಿನಿ ತೀವ್ರ ಟೀಕೆಗೊಳಗಾಗಿದ್ದಾರೆ.
ಪಾಕಿಸ್ತಾನ ಕಲಾವಿದರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ, ಅವರು ಭಾರತದಲ್ಲಿ ಕಾರ್ಯನಿರ್ವಹಿಸಬೇಕೆ ಅಥವಾ ಬೇಡವೋ ಎನ್ನುವ ಬಗ್ಗೆ ನನಗೆ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಕಲಾವಿದರು ದೇಶವನ್ನು ತೊರೆಯಬೇಕು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇಂತಹ ವಿವಾದಾತ್ಮಕ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ನಾವು ಕಲಾವಿದರಾಗಿರುವುದರಿಂದ ಪಾಕಿಸ್ತಾನದ ಕಲಾವಿದರು ನಮ್ಮಲ್ಲಿಗೆ ಬರುತ್ತಾರೆ ಎಂದು ಹೇಳಿದ್ದಾರೆ.
ನಾನು ಒಬ್ಬ ಕಲಾವಿದೆಯಾಗಿ ಅವರ ಕಲಾನೈಪುಣ್ಯತೆಯನ್ನು ಹೊಗಳುತ್ತೇನೆ. ಆದರೆ,ಅವರು ಭಾರತದಲ್ಲಿ ವಾಸಿಸಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ನಾನು ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉತ್ತರ ಕಾಶ್ಮಿರದಲ್ಲಿರುವ ಉರಿ ಸೇನಾ ಕೇಂದ್ರದ ಮೇಲೆ ಪಾಕ್ ಉಗ್ರರು ದಾಳಿ ನಡೆಸಿ 19 ಸೈನಿಕರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂಡಿಯನ್ ಮೋಶನ್ ಪಿಕ್ಚರ್ಸ್ ಪೊಡ್ಯೂಸರ್ಸ್ ಅಸೋಸಿಯೇಶನ್ ಈಗಾಗಲೇ ಪಾಕ್ ಕಲಾವಿದರಿಗೆ ನಿಷೇಧ ಹೇರಿದೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ