ಪತ್ನಿಗೆ ತಲಾಕ್ ನೀಡಿ, ನಾದಿನಿ ಜೊತೆ ಪರಾರಿಯಾದ ಪತಿ

ಮಂಗಳವಾರ, 12 ಡಿಸೆಂಬರ್ 2017 (14:56 IST)
ತ್ರಿವಳಿ ತಲಾಖ್ ವಿರುದ್ಧ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಗೆ ತಲಾಖ್ ನೀಡಿ, ನಾದಿನಿ ಜೊತೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
 
ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಡಿಯೋಬಾಂಡ್ ಪಠಾಣ್‍ಪುರ ಕಾಲೊನಿಯಲ್ಲಿ ಸಂತ್ರಸ್ತ ಮಹಿಳೆ ನೂರ್‍‍ಜಹಾನ್ ಬೇಗಂ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
 
ಕಳೆದ ಮೂರು ವರ್ಷಗಳ ಹಿಂದೆ ಪಕ್ಕದ ನಿವಾಸಿ ಅರ್ಷದ್ ಅಹ್ಮದ್‍ ಜೊತೆ ಮದುವೆಯಾಗಿದ್ದು, ಒಂದು ಹೆಣ್ಣು ಮಗು ಕೂಡ ಇದೆ. ಮದುವೆಯ ಬಳಿಕ ಪತಿ ವರದಕ್ಷಿಣೆ ತರುವಂತೆ ಪ್ರತಿದಿನ ಪೀಡಿಸುತ್ತಿದ್ದ, ಪೋಷಕರು ಆತನ ಬೇಡಿಕೆಗಳನ್ನು ಈಡೇರಿಸುತ್ತಲೇ ಬಂದಿದ್ದರು. ಆದರೆ ಡಿಸೆಂಬರ್ 7ರಂದು ಅರ್ಷದ್ ನನ್ನ ಜೊತೆ ಕ್ರೂರವಾಗಿ ನಡೆದುಕೊಂಡು ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿದ್ದ. ಈ ವೇಳೆ ನೆರೆ ಹೊರೆಯವರು ರಕ್ಷಣೆ ಮಾಡಿದ್ದಾರೆ. ನಂತರ ಪತಿ ನನಗೆ ತಲಾಖ್ ನೀಡಿ, ನನ್ನ ಆಭರಣಗಳನ್ನು ತೆಗೆದುಕೊಂಡು ನನ್ನ ತಂಗಿಯ ಜೊತೆ ಓಡಿ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಈ ಸಂಬಂಧ ದೂರು ದಾಖಲಿಸಲು ಹೋದರೆ, ಪೊಲೀಸರು ಪ್ರಕರಣ ದಾಖಲಿಸಲು ಒಪ್ಪಿಕೊಳ್ಳಲಿಲ್ಲ ಎಂದು ನೂರ್ ಜಹಾನ್ ಬೇಗಂ ಆರೋಪಿಸಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ