ಗುಜರಾತ್ ನಲ್ಲಿ 1439 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ

ಸೋಮವಾರ, 25 ಏಪ್ರಿಲ್ 2022 (16:59 IST)

ಕಳೆದ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿ ಸುಮಾರು 17 ಕಂಟೇನರ್ ಗಳಲ್ಲಿ ಆಗಮಿಸಿದ್ದ 205.60 ಕೆಜಿ ತೂಕದ ಹೆರಾಯಿನ್ ಅನ್ನು ರೆವಿನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯ ವಶಕ್ಕೆ ಪಡೆದಿದೆ.

ಇದಕ್ಕೂ ಮುನ್ನ ಅಂದರೆ ಏಪ್ರಿಲ್ 21ರಂದು ಸುಮಾರು 300 ಕೆಜಿ ಅಂದರೆ 1300 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆಯಾಗಿತ್ತು. ಮಾದಕ ದ್ರವ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಗುಜರಾತ್ ಬಂದರು ಮೂಲಕ ಆಗಮಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ