ಬಿಜೆಪಿಯ ನಾಲ್ಕು ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಯಾರ ಕೈ ಮೇಲಾಗಿದೆ ಎಂಬ ಬಿಜೆಪಿಆರಂಭವಾಗಿದೆ.
ನಾಲ್ವರ ಪೈಕಿ ಮೂವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅಭ್ಯರ್ಥಿಗಳು ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೇಶವಪ್ರಸಾದ್ ಮತ್ತು ಹೇಮಲತಾ ಅವರ ಆಯ್ಕೆಯಲ್ಲಿ ಸಂತೋಷ್ ಕೈ ಮೇಲಾಗಿದೆ. ಇನ್ನು ನಾರಾಯಣಸ್ವಾಮಿ ಆಯ್ಕೆಯಲ್ಲೂ ಅವರ ಕೈಚಳಕ ನಡೆದಿದೆ ಎನ್ನಲಾಗಿದೆ.
ಇದೇ ವೇಳೆ ತಮ್ಮ ಆಪ್ತರಾದ ಗೀತಾ ವಿವೇಕಾನಂದ, ನಿರ್ಮಲ್ ಸುರಾನಾ , ನಂದೀಶ್, ಸಿದ್ದರಾಜು ಅವರಿಗೆ ಟಿಕೆಟ್ ಕೊಡಿಸಲು ಸಂತೋಷ್ ಅವರಿಗೆ ಸಾಧ್ಯವಾಗಿಲ್ಲವಾದರೂ ಹೆಚ್ಚಿನ ಆಯ್ಕೆಯಲ್ಲಿ ಅವರೇ ಮುನ್ನಡೆ ಸಾಧಿಸಿದ್ದಾರೆ.
ಇದರ ಜೊತೆಗೆ ಬಿಎಸ್ ವೈ ಪುತ್ರ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಬಣದ ಯಾರಿಗೂ ಅವಕಾಶ ಸಿಕ್ಕಿಲ್ಲ. ಹೀಗಾಗಿ ಬಿಎಸ್ವೈಗೆ ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಭಾರೀ ಹಿನ್ನಡೆಯಾಗಿದೆ.
ಇದೇ ವೇಳೆ ಪರಿಷತ್ ಟಿಕೆಟ್ ವಂಚಿತ ನಿರ್ಮಲ್ ಸುರಾನಾ ಹಾಗೂ ಗೀತಾ ವಿವೇಕಾನಂದ ಅವರಿಗೆ ರಾಜ್ಯಸಭೆ ಟಿಕೆಟ್ ಕೊಡಿಸಲು ಬಿಎಲ್ ಸಂತೋಷ್ ಪ್ರಯತ್ನ ನಡೆಸಿದ್ದಾರೆ. ಅದೂ ಕೂಡ ಕೈಗೂಡಿದರೆ ಅವರು ರಾಜ್ಯ ಬಿಜೆಪಿ ವಿಚಾರದಲ್ಲಿ ಇನ್ನಷ್ಟು ಪ್ರಬಲರಾಗಿ ಬಿಎಸ್ ವೈ ಬಣದ ಕೆಂಗಣ್ಣಿಗೆ ಗುರಿಯಾಗಲಿದ್ದಾರೆ.