ಮುಸ್ಲಿಂ ಮಹಿಳೆಯರಿಗೂ ಮಸೀದಿಗಳಿಗೆ ಪ್ರವೇಶ ನೀಡಿ ಎಂಬ ಮನವಿ ತಳ್ಳಿ ಹಾಕಿದ ಹೈಕೋರ್ಟ್

ಶುಕ್ರವಾರ, 12 ಅಕ್ಟೋಬರ್ 2018 (07:21 IST)
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರಿಗೂ ಪ್ರವೇಶ ಕಲ್ಪಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ ಬೆನ್ನಲ್ಲೇ ಇದೀಗ ಮುಸ್ಲಿಂ ಮಹಿಳೆಯರಿಗೂ ಮಸೀದಿಗಳಿಗೆ ಪ್ರವೇಶ ಕಲ್ಪಿಸುವಂತೆ ಹಿಂದೂ ಸಂಸ್ಥೆಯೊಂದು ಸಲ್ಲಿಸಿದ ಅರ್ಜಿಯನ್ನು ಕೇರಳ ಹೈಕೋರ್ಟ್ ತಳ್ಳಿ ಹಾಕಿದೆ.

ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ದೆತ್ತಾತ್ರೇಯ ಸಾಯ್ ಸ್ವರೂಪ್ ನಾಥ್ ಮುಸ್ಲಿಂ ಮಹಿಳೆಯರಿಗೂ ಮಸೀದಿ ಪ್ರವೇಶ ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು.

ಮುಸ್ಲಿಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ನಿರಾಕರಿಸುವುದರ ಮೂಲಕ ಅವರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಇದು ಮಹಿಳೆಯರ ಮೇಲೆ ತಾರತಮ್ಯ ಮಾಡಿದಂತೆ ಎಂದು ಮನವಿಯಲ್ಲಿ ಸ್ವಾಮಿ ದೆತ್ತಾತ್ರೇಯ ಪ್ರತಿಪಾದಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ