ಬಿಬಿಎಂಪಿ ವಾರ್ಡ್‌ ವಿಂಗಡನೆ ಅಧಿಕಾರ ಹೈಕೋರ್ಟ್‌ಗಿದೆ

ಶನಿವಾರ, 27 ಆಗಸ್ಟ್ 2022 (13:56 IST)
ನವದೆಹಲಿ : ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳ ಪುನರ್ ವಿಂಗಡನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾಡುವ ಅಧಿಕಾರ ರಾಜ್ಯ ಹೈಕೋರ್ಟ್ಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಬಗ್ಗೆ ಕೆಲವು ಪಾಲಿಕೆ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ನಜೀರ್ ಅಹ್ಮದ್ ನೇತೃತ್ವದ ದ್ವಿ ಸದಸ್ಯ ಪೀಠ, ವಾರ್ಡ್ಗಳ ಪುನರ್ ವಿಂಗಡನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರ ಹೊಂದಿದೆ.

ವಿಚಾರಣೆ ಬಳಿಕ ಚುನಾವಣೆ ಬಗ್ಗೆಯೂ ಹೈಕೋರ್ಟ್ ನಿರ್ಧರಿಸಬಹುದು ಎಂದು ಮೌಖಿಕ ಆದೇಶ ನೀಡಿದೆ. 

ಸದ್ಯ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಎಂ. ಶಿವರಾಜು ಮೂಲ ಪ್ರಕರಣವನ್ನು ಹಾಗೇ ಉಳಿಸಿಕೊಳ್ಳಲಿದ್ದು ಎಂಟು ವಾರಗಳ ಬಳಿಕ ಪಟ್ಟಿ ಮಾಡಲಿದ್ದು ಆಕ್ಷೇಪಣೆಗಳಿದ್ದಲ್ಲಿ ಅಂದು ಗಮನಕ್ಕೆ ತರಬಹುದು ಎಂದು ಕೋರ್ಟ್ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ