ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಮುಂದುವರೆಸಲು ಹೈಕೋರ್ಟ್ ಆದೇಶ

geetha

ಶುಕ್ರವಾರ, 2 ಫೆಬ್ರವರಿ 2024 (20:20 IST)
ವಾರಣಾಸಿ- ಜ್ಞಾನವಾಪಿ ಮಸೀದಿ ಸಂಕೀರ್ಣದ 'ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಮುಂದುವರೆಸಲು ಅಲಹಾಬಾದ್ ಹೈಕೋರ್ಟ್ ಅವಕಾಶ ನೀಡಿದೆ. ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.ನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಈ ಹಿಂದೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತ್ತು.
 
ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವಕೇಟ್ ಜನರಲ್‌ಗೆ ಆದೇಶಿಸಿದೆ.ಈ ಬದಲಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗುವಂತೆ ಮಸೀದಿ ಸಮಿತಿಗೆ ಸೂಚಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ