ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ

ಬುಧವಾರ, 8 ಜುಲೈ 2015 (09:14 IST)
ಪ್ರೌಢಶಾಲೆಯೊಂದರಲ್ಲಿ ಮುಖ್ಯೋಪ್ಯಾಧ್ಯಾಯಿನಿಯಾಗಿ ಕೆಲಸ ಮಾಡುತ್ತಿದ್ದ ಮಧ್ಯವಯಸ್ಕ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. 
 
ಚಿಕ್ಕಹೊನ್ನೇನಹಳ್ಳಿಯ ತಮ್ಮ ಸ್ವಗೃಹದಲ್ಲಿ 49 ವರ್ಷದ ವನಜಾಕ್ಷಿ ಸಾವಿಗೆ ಶರಣಾಗಿದ್ದಾರೆ. 
 
ಹಳೇಕೊಪ್ಪಲುವಿನ ಪ್ರೌಢಶಾಲೆಯಲ್ಲಿ ಅವರು ಮುಖ್ಸ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ದುಡುಕಿನ  ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
 
ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ