ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಡಿಎಂಕೆ ಪ್ರತಿಭಟನೆ

ಬುಧವಾರ, 14 ಜೂನ್ 2017 (13:31 IST)
ಎಐಎಡಿಎಂಕೆ ಸದಸ್ಯರ ಕುಟುಕು ಕಾರ್ಯಾಚರಣೆ ಕುರಿತಂತೆ ಸದನದಲ್ಲಿ ಚರ್ಚೆಯಾಗಬೇಕು ಎನ್ನುವ ಡಿಎಂಕೆ ನಾಯಕರ ಕೋರಿಕೆಯನ್ನು ತಿರಸ್ಕರಿಸಿದ ಸ್ಪೀಕರ್ ವರ್ತನೆಯಿಂದ ಸದನದಲ್ಲಿ ಹೈಡ್ರಾಮಾ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಎಐಎಡಿಎಂಕೆ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಡಿಎಂಕೆ ಸದಸ್ಯರು, ಸದನದಲ್ಲಿ ಮೊದಲು ಸ್ಟ್ರಿಂಗ್ ಆಪರೇಶನ್ ಕುರಿತ ಚರ್ಚೆಯಾಗಲಿ ಎಂದು ಒತ್ತಾಯಿಸಿದರು. ಡಿಎಂಕೆ ಸದಸ್ಯರ ನಿಲುವು ತಿರಸ್ಕರಿಸಿದ ಸಭಾಪತಿ ಧನಪಾಲ್ ಮತ್ತು ಡಿಎಂಕೆ ಮುಖಂಡ ಸ್ಟಾಲಿನ್ ಮಧ್ಯೆ ವಾಗ್ವಾದ ನಡೆಯಿತು.
 
ಸದನದಲ್ಲಿ ಕೋಲಾಹಲ ಉಂಟಾದಾಗ ಸಭಾಪತಿ ಡಿಎಂಕೆ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಸಭಾಪತಿ ತೀರ್ಮಾನದಿಂದ ಅಸಮಾಧಾನಗೊಂಡ ಡಿಎಂಕೆ ಸದಸ್ಯರು ಸ್ಟಾಲಿನ್ ನೇತೃತ್ವದಲ್ಲಿ ಸದನದ ಮುಂದೆ ಪ್ರತಿಭಟನೆ ನಡೆಸಿದರು.
 
ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ಸದಸ್ಯರು ಪೊಲೀಸರು ಬಂಧಿಸಿದ್ದಾರೆ. ಸ್ಟ್ರಿಂಗ್ ಆಪರೇಶನ್ ಘಟನೆಯನ್ನು ಸಿಬಿಐಗೆ ಒಪ್ಪಿಸುವವರಿಗೆ ಹೋರಾಟ ನಿಲ್ಲದು ಎಂದು ಡಿಎಂಕೆ ಮುಖಂಡರು ಘೋಷಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ