ಪೀಠದಲ್ಲಿ ಹಿಜಬ್ ಅರ್ಜಿ ವಿಚಾರಣೆ : ಸುಪ್ರೀಂ
ಇಂದು ಕಲಾಪ ಆರಂಭದಲ್ಲಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್, ವಿಚಾರಣೆ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಹೆಣ್ಣು ಮಕ್ಕಳು ಶಿಕ್ಷಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮುಂದಿನ ವಾರ ಸೂಕ್ತ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಭರವಸೆ ನೀಡಿದರು.