ಹಿಜಬ್ ನಿಷೇಧದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ : ಸಿಜೆಐ

ಮಂಗಳವಾರ, 2 ಆಗಸ್ಟ್ 2022 (13:52 IST)
ನವದೆಹಲಿ : ಶಾಲಾ ಕಾಲೇಜು ತರಗತಿಗಳಲ್ಲಿ ಹಿಜಬ್ ಬ್ಯಾನ್ ಮಾಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವಿಳಂಬವಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ಹೇಳಿದ್ದಾರೆ.

ಪ್ರಕರಣದ ವಿಚಾರಣೆ ಬಗ್ಗೆ ಇಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದ ವೇಳೆ ನ್ಯಾಯಮೂರ್ತಿಗಳು ಹೀಗೆ ಅಭಿಪ್ರಾಯಪಟ್ಟಿದ್ದಾರೆ.

ಈ ಅರ್ಜಿಯ ವಿಚಾರಣೆ ಆರಂಭಿಸಬೇಕಿತ್ತು, ಆದರೆ ವಿಚಾರಣೆ ನಡೆಸಬೇಕಿದ್ದ ನ್ಯಾಯಾಧೀಶರ ಪೈಕಿ ಓರ್ವರು ಅನಾರೋಗ್ಯಕ್ಕಿಡಾಗಿದ್ದಾರೆ. ಹೀಗಾಗಿ ವಿಚಾರಣೆ ವಿಳಂಬವಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ವಿಶೇಷ ಪೀಠ ರಚನೆ ಮಾಡಲಾಗುವುದು ಎಂದು ಸಿಜೆಐ ಹೇಳಿದರು. 

ಕನಿಷ್ಠ ವಿಚಾರಣೆಗೆ ದಿನಾಂಕ ನಿಗಧಿಯಾದರೂ ಮಾಡಿ ಎಂದು ಮೀನಾಕ್ಷಿ ಅರೋರಾ ಮನವಿ ಮಾಡಿದರು. ಆದರೆ ಅದಕ್ಕೂ ಸಿಜೆಐ ನಿರಾಕರಿಸಿದರು. ಕಳೆದ ವಿಚಾರಣೆಯಲ್ಲಿ ಜುಲೈನಲ್ಲಿ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ