ಹಿಜಬ್ : ವಿದ್ಯಾರ್ಥಿನಿಯರು ಪರೀಕ್ಷೆಗೆ ಶೀಘ್ರವೇ ಪ್ರಕರಣದ ವಿಚಾರಣೆ

ಬುಧವಾರ, 22 ಫೆಬ್ರವರಿ 2023 (13:35 IST)
ನವದೆಹಲಿ : ಶಾಲಾ-ಕಾಲೇಜುಗಳ ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುವ ಬಗ್ಗೆ ನಾವು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ಇಂದು ವಕೀಲ ಶಾದನ್ ಫರಾಸತ್ ಪ್ರಕರಣ ಬಗ್ಗೆ ಸಿಜೆಐ ಪೀಠದ ಮುಂದೆ ಪ್ರಸ್ತಾಪಿಸಿದರು. ದ್ವಿ ಸದಸ್ಯ ಪೀಠದಲ್ಲಿ ಭಿನ್ನ ತೀರ್ಪು ಬಂದಿದೆ. ಸರ್ಕಾರಿ ಕಾಲೇಜುಗಳಲ್ಲಿ ಹಿಜಬ್ ನಿಷೇಧದಿಂದಾಗಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ, ಈಗಾಗಲೇ ಒಂದು ವರ್ಷವನ್ನು ವಿದ್ಯಾರ್ಥಿನಿಯರು ಕಳೆದುಕೊಂಡಿದ್ದಾರೆ. ಮಾರ್ಚ್ 9ರಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನೆಲೆ ಈ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಮರು ಪ್ರಶ್ನೆ ಮಾಡಿದ ಸಿಜೆಐ ಡಿವೈ ಚಂದ್ರಚೂಡ್, ಪರೀಕ್ಷೆಗೆ ಹಾಜರಾಗಲು ಯಾಕೆ ಅವಕಾಶ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ವಕೀಲ ಶಾದನ್ ಫರಾಸತ್ ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಬ್ ನಿಷೇಧಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ