ಹಿಮಾಚಲ ಬಿಜೆಪಿ ಸಿಎಂ ಅಭ್ಯರ್ಥಿಗೆ ಸೋಲು

ಸೋಮವಾರ, 18 ಡಿಸೆಂಬರ್ 2017 (12:21 IST)
ಹಿಮಾಚಲ ಪ್ರದೇಶದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ ಧುಮಾಲ್ ಸೋಲು ಕಂಡಿದ್ದಾರೆ.
 
ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಬಿಜೆಪಿಇ 44 ಸ್ಥಾನಗಳಲ್ಲಿ ಮುನ್ನಡೆ ಪಡೆಯುವ ಮೂಲಕ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಸ್ಥಾಪಿಸಲು ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋಲು ಕಂಡಿದ್ದಾರೆ.

ಸುಜಾನ್ ಪುರದಲ್ಲಿ ಎರಡು ಸಾವಿರ ಮತಗಳ ಅಂತರದಿಂದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ ಧುಮಾಲ್ ಸೋಲು ಅನುಭವಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 20 ಹಾಗೂ ಇತರರು 4 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ