ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಹಿಂದೂಗಳು ಬಹುಸಂಖ್ಯಾತರಾಗಿರಬೇಕು: ಸುಬ್ರಹ್ಮಣ್ಯಂ ಸ್ವಾಮಿ

ಗುರುವಾರ, 26 ಮೇ 2016 (11:22 IST)
ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ರಾಷ್ಟ್ರವಾಗಿ ಉಳಿಸಲು ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದಲ್ಲಿ ಮಾತ್ರ ಸಾಧ್ಯ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. 
 
ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.80 ರಷ್ಟು ಹಿಂದೂಗಳಿದ್ದಲ್ಲಿ ಮಾತ್ರ ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಮಾನ್ಯತೆಯಿದೆ. ಹಿಂದೂಗಳ ಜನಸಂಖ್ಯೆಯಲ್ಲಿ ಕುಸಿತವಾದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿ ಸಿಲುಕಲಿದೆ ಎಂದು ತಿಳಿಸಿದ್ದಾರೆ.
 
ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತ್ರನಾಡಿದ ಸ್ವಾಮಿ. ದೇಶದಲ್ಲಿ ಹಿಂದೂ ಜನಸಂಖ್ಯೆ ಸದಾ ಶೇ.80ಕ್ಕಿಂತ ಮೇಲಿರಬೇಕು ಎಂದು ಅಭಿಪ್ರಾಯಪಟ್ಟರು.
 
ಹಿಂದೂಗಳು ಬಹುಸಂಖ್ಯಾತರಾಗಿ ಮುಂದುವರಿದಾಗ ಮಾತ್ರ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ವಾದಕ್ಕೆ ಬೆಲೆ ಬರುತ್ತದೆ. ಮುಸ್ಲಿಮರು ಬಹುಸಂಖ್ಯಾತರಾದ ಕಾಶ್ಮಿರ ಅಥವಾ ಕೇರಳದ ಮಲ್ಲಾಪುರಂನಲ್ಲಿ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವ ಅಥವಾ ಜಾತ್ಯಾತೀತವಾದಕ್ಕೆ ಬೆಲೆಯಿರುವುದಿಲ್ಲ. ಇಂತಹ ಪ್ರದೇಶಗಳಲ್ಲಿ ಹಿಂದೂಗಳು ಅಪಾಯ ಎದುರಿಸುತ್ತಿರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು. 
 
ಮೋದಿ ಸರಕಾರ ಅಯೋಧ್ಯೆಯಲ್ಲಿರುವ ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದ, ಕಾಶಿ ವಿಶ್ವನಾಥ್ ದೇವಾಲಯ ಹಾಗೂ ಗ್ಯಾನ್‌ವಾಪಿ ಮಸೀದಿ ಮತ್ತು ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ