ಹಿಟ್ ಅಂಡ್ ರನ್ ಪ್ರಕರಣ: ಸಲ್ಮಾನ್ ಶಿಕ್ಷೆ ಪ್ರಮಾಣಕ್ಕಾಗಿ ವಾದ ಮಂಡನೆ

ಬುಧವಾರ, 6 ಮೇ 2015 (12:19 IST)
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಎಲ್ಲಾ ದೋಷಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಇಂದು ಶಿಕ್ಷೆಗೆ ಸಂಬಂಧಿಸಿದಂತೆ ವಾದ ವಿವಾದ ನಡೆಯುತ್ತಿದ್ದು, ಶಿಕ್ಷೆಯನ್ನು 3 ವರ್ಷಗಳಿಗಿಳಿಸಬೇಕೆಂದು ಸಲ್ಮಾನ್ ಪರ ವಕೀಲರು ವಾದ ಮಂಡಿಸಿದ್ದಾರೆ ಎನ್ನಲಾಗಿದೆ. 
 
ಮೂಲಗಳ ಪ್ರಕಾರ, ದೋಷಿ ಎಂದು ಸಾಭೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಗೊಳ್ಳುವ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣಕ್ಕೆ ಸಂಬಂದಿಸಿದಂತೆ ಅವರ ಪರ ವಕೀಲರು ವಾದ ಮಂಡನೆಗಿಳಿದಿದ್ದು, ಆರೋಪಿಯಾಗಿರುವ ಸಲ್ಮಾನ್ ಅವರು ಸಾಕಷ್ಟು ಮಾನವೀಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಅವರ ಶಿಕ್ಷೆ ಪ್ರಮಾಣ ಕಡಿತಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದು, 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವಂತೆ ಮನವಿ ಮಾಡಲಾಗಿದೆ. ಇನ್ನು ಪ್ರಕರಣದಲ್ಲಿ 10 ವರ್ಷ ಶಿಕ್ಷೆ ವಿಧಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ವಕೀಲರು ಈ ರೀತಿಯಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.  
 
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಮುಂದುವರಿಸಿದ ವಕೀಲರು, ಪ್ರಕರಣದಲ್ಲಿ ಹಾನಿಗೊಳಗಾದ ಸಂತ್ರಸ್ತರಿಗೆ ನಾವು ಎಷ್ಟೇ ಪರಿಹಾರ ಮೊತ್ತವನ್ನು ನೀಡುವಂತೆ ಸೂಚಿಸಿದರೂ ಕೂಡ ನಾವು ನೀಡಲು ಸಿದ್ದರಿದ್ದೇವೆ ಎಂದಿದ್ದಾರೆ. 
 
ಸಾಕಷ್ಟು ಸಾರ್ವಜನಿಕರಿಗೆ ನೆರವಾಗಿರುವ ಸಲ್ಮಾನ್ 600 ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗಾಗಿ 42 ಕೋಟಿ ದಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಮಾಜ ಸೇವೆಯನ್ನು ಪರಿಗಣಿಸಿಯಾದರೂ ಕಡಿಮೆ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.  
 
ಇನ್ನು ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಸಲ್ಮಾನ್ ಅವರನ್ನು ಈಗಾಗಲೇ ಪೊಲೀಸರ ವಶಕ್ಕೆ ನೀಡಲಾಗಿದೆ. 
 

ವೆಬ್ದುನಿಯಾವನ್ನು ಓದಿ