ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಲಿರುವ ಹನಿಪ್ರೀತ್
ನವದೆಹಲಿ: ಡೇರಾ ಮುಖ್ಯಸ್ಥ, ಅಪರಾಧಿ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ನಿರೀಕ್ಷಣಾ ಜಾಮೀನಿಗಾಗಿ ದೆಹಲಿ ಹೈ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.
ಆದರೆ ಹನಿಪ್ರೀತ್ ಎಲ್ಲಿದ್ದಾಳೆ ಎಂಬುದು ತಿಳಿದಿಲ್ಲ. ರಾಮ್ ರಹೀಂ ಸಿಂಗ್ ವಿರುದ್ಧ ಬಂದಿರುವ ತೀರ್ಪಿನ ಪರವಾಗಿ ತೀವ್ರ ಬೇಸರವಾಗಿದೆ. ಅಲ್ಲದೆ ಬಾಬಾ ಜತೆ ಇಲ್ಲ ಸಲ್ಲದ ಸಂಬಂಧ ಕಲ್ಪಿಸಿರುವ ಬಗ್ಗೆ ಹನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶೀಘ್ರ ವಿಚಾರಣೆಗಾಗಿ ಕೋರ್ಟ್ ನಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.