ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಯುವಕನೊಬ್ಬ ಪ್ರತಿಭಟಿಸಿದ್ದು ಹೇಗೆ ಗೊತ್ತಾ?

ಮಂಗಳವಾರ, 5 ಜೂನ್ 2018 (15:21 IST)
ನವದೆಹಲಿ : ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ಯುವಕನೊಬ್ಬ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.


ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಮೋದಿ ಸರ್ಕಾರದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚೆಗೆ ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದರೂ ಕೂಡ ಇದರಿಂದ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಬೆಲೆ ಇಳಿಸುತ್ತಿರುವುದು.


ಇದೇರೀತಿ ಸೋಮವಾರ ಪೆಟ್ರೋಲ್ ಬೆಲೆಯಲ್ಲಿ ಮತ್ತೆ 9 ಪೈಸೆ ಇಳಿಕೆಯಾಗಿದ್ದು, ಇದರಿಂದ ಬೇಸತ್ತ ತೆಲಂಗಾಣದ ರಾಜಣ್ಣ ಎಂಬಾತ 9 ಪೈಸೆ ಮೊತ್ತದ ಚೆಕ್ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿವುದರ ಮೂಲಕ ಪ್ರತಿಭಟನೆ ನಡೆಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ