ಕೇಂದ್ರದಲ್ಲಿ ಶೇಕಡ ಎಷ್ಟು ಮಂದಿ ವರ್ಕ್ ಫ್ರಂ ಹೋಂ ಗೊತ್ತ?

ಮಂಗಳವಾರ, 4 ಜನವರಿ 2022 (07:47 IST)
ನವದೆಹಲಿ : ಕೋವಿಡ್ನಿಂದಾಗಿ ಕೇಂದ್ರದ ಶೇ. 50ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ.
 
ಕಾರ್ಯದರ್ಶಿ ರ್ಯಾಂಕ್ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. 

ಕೇಂದ್ರ ತನ್ನ ಎಲ್ಲಾ ಉದ್ಯೋಗಿಗಳು ಬಯೋಮೆಟ್ರಿಕ್ ಹಾಜರಾತಿ ಹಾಕುವುದನ್ನು ಜನವರಿ 31ರವರೆಗೆ ಸ್ಥಗಿತಗೊಳಿಸಿದೆ. ಮುಂದಿನ ಆದೇಶದವರೆಗೆ ಉದ್ಯೋಗಿಗಳು ಹಾಜರಾತಿ ರೆಜಿಸ್ಟರ್ನಲ್ಲಿ ದಾಖಲಿಸಬೇಕು. ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ