ಮೇವು ಹಗರಣದಲ್ಲಿ ಲಾಲು ಪ್ರಸಾದ್‌ಗೆ ಎಷ್ಟು ವರ್ಷ ಜೈಲು?

ಸೋಮವಾರ, 21 ಫೆಬ್ರವರಿ 2022 (15:13 IST)
ನವದೆಹಲಿ : ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಹಾಗೂ ಬಿಹಾರ್ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಹಾಗೂ 60 ಲಕ್ಷ ರೂ. ದಂಡ ವಿಧಿಸಿದೆ.
 
ಫೆ.15 ರಂದು ಆರ್ಜೆಡಿ ಮುಖ್ಯಸ್ಥರನ್ನು ಈ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲು ನಿರ್ಧರಿಸಲಾಗಿತ್ತು.

ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ಹಣವನ್ನು ಅಕ್ರಮವಾಗಿ ಪಡೆದಿದ್ದರು. ಮೇವು ಹಗರಣದ ಐದನೇ ಪ್ರಕರಣದಲ್ಲಿ ಯಾದವ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಕಳೆದ ವಾರ ದೋಷಾರೋಪಣೆಯ ನಂತರ ಅನಾರೋಗ್ಯದ ಕಾರಣದಿಂದಾಗಿ ಯಾದವ್ ಅವರನ್ನು ಹೊತ್ವಾರ್ ಜೈಲಿನಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ದುಮ್ಕಾಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಈ ಹಿಂದೆ 14 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ