ಫೇಸ್‍ಬುಕ್ ಬಳಕೆದಾರರ ಇಳಿಕೆಗೆ ಕಾರಣವೇನು?

ಗುರುವಾರ, 17 ಫೆಬ್ರವರಿ 2022 (12:01 IST)
ನ್ಯೂಯಾರ್ಕ್ : 18 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಫೇಸ್‍ಬುಕ್ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
 
3 ತಿಂಗಳ ಅವಧಿಯಲ್ಲಿ ಬಳಕೆದಾರರ ಸಂಖ್ಯೆ 192.9 ಕೋಟಿಗೆ ಕುಸಿದಿದ್ದು, ಈ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ 193 ಕೋಟಿಯಷ್ಟು ಬಳಕೆದಾರರಿದ್ದರು ಎಂದು ಫೇಸ್‍ಬುಕ್ ಸಂಸ್ಥೆಯ ಮಾತೃಸಂಸ್ಥೆ ಮೆಟಾ ಬಹಿರಂಗಪಡಿಸಿದೆ.

ಮೇಟಾ ಹಣಕಾಸು ಅಧಿಕಾರಿ ಡೇವಿಡ್ ವೆಹ್ನಾರ್ ಹೇಳವ ಪ್ರಕಾರ, ಭಾರತದಲ್ಲಿ ಡೇಟಾ ಪ್ಯಾಕೇಜ್ ಬೆಲೆಯಲ್ಲಿನ ಹೆಚ್ಚಳವಾಗಿದೆ. ಹೀಗಾಗಿ ಒಟ್ಟಾರೆಯಾಗಿ ದೇಶದಾದ್ಯಂತ ಫೇಸ್‍ಬುಕ್ ಬಳಕೆದಾರರ ಸಂಖ್ಯೆಯು ಕೂಡಾ ಕಡಿಮೆಯಾಗುತ್ತಾ ಬರುತ್ತಿದೆ.

ನಾವು ಈ ಅಂಶಗಳ ಜೊತೆಗ ಸ್ಪರ್ಧೆಯನ್ನು ಮಾಡಬೇಕಾಗಿದೆ. ಈ ಬೆಳವಣೆಗೆ ಹೊಸ ಬಳಕೆದಾರರ ಮೇಲೆ ನೆಗಿಟಿವ್ ಪ್ರಭಾವಬೀರುತ್ತದೆ ಎಂದು ಹೇಳಿದ್ದಾರೆ.

ಬಳಕೆದಾರರ ಸಂಖ್ಯೆ ಕಡಿಮೆಯಾಗಿದ ವಿಚಾರ ತಿಳಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಮೆಟಾ ಷೇರುಗಳು ಶೇ.23ರಷ್ಟು ಕುಸಿಸಿದ್ದು, ಕಂಪನಿಗೆ ಒಂದೇ ದಿನದಲ್ಲಿ 16 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ