ಚೀನಾದಿಂದ ತೈಲಕ್ಕೆ ಭಾರೀ ಬೇಡಿಕೆ

ಶುಕ್ರವಾರ, 3 ಮಾರ್ಚ್ 2023 (11:23 IST)
ನವದೆಹಲಿ : ಚೀನಾದಿಂದ ಭಾರೀ ಬೇಡಿಕೆಯಿದ್ದರೂ, ಭಾರತಕ್ಕೆ ತೈಲವನ್ನು ಮಾರಾಟ ಮಾಡಲು ರಷ್ಯಾ ಒಲವು ತೋರುತ್ತಿದೆ. ಹೀಗಾಗಿ ಎಷ್ಟು ಸಾಧ್ಯವೋ ಅಷ್ಟು ತೈಲವನ್ನು ಭಾರತಕ್ಕೆ ಮಾರಾಟ ಮಾಡುತ್ತಿದೆ.
 
ಭಾರತವು ವರ್ಷದ ಹಿಂದೆ ರಷ್ಯಾದ ತೈಲವನ್ನು ಖರೀದಿಸಿರಲಿಲ್ಲ. ಆದರೆ ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ಮಾಸ್ಕೋ ಮೇಲೆ ನಿರ್ಬಂಧಗಳನ್ನು ವಿಧಿಸಿದ ನಂತರ ಭಾರತಕ್ಕೆ ನಿರ್ಣಾಯಕ ಮಾರುಕಟ್ಟೆಯಾಗಿದೆ. ಫೆಬ್ರವರಿಯಲ್ಲಿ ಭಾರತವು ರಷ್ಯಾದಿಂದ ದಿನಕ್ಕೆ ಸುಮಾರು 18 ಲಕ್ಷ ಬ್ಯಾರಲ್ ತೈಲವನ್ನು ಆಮದು ಮಾಡಿಕೊಂಡಿದೆ.

ಅಂತೆಯೇ ಚೀನಾ ಕೂಡ ರಷ್ಯಾದಿಂದ ತೈಲ ಖರೀದಿಸುತ್ತಿದೆ. ಕೋವಿಡ್ ಶೂನ್ಯ ನೀತಿಗಳನ್ನು ಕೈಬಿಟ್ಟ ಚೀನಾ ಈಗ ಹೆಚ್ಚಿನ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸಬಹುದು. ಆದರೂ ರಷ್ಯಾಗೆ ಭಾರತೀಯ ಮಾರುಕಟ್ಟೆ ಮೇಲೆ ಹೆಚ್ಚಿನ ಒಲವು ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ