ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯ ತಲೆ ಕಡಿದ ಪತಿ
ಮಂಗಳವಾರ, 12 ನವೆಂಬರ್ 2019 (06:58 IST)
ಉತ್ತರ ಪ್ರದೇಶ : ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.
ನರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.