ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯನ್ನೇ ಕೊಂದ ಪತಿ
ಮಂಗಳವಾರ, 27 ಏಪ್ರಿಲ್ 2021 (09:19 IST)
ನವದೆಹಲಿ : ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬ ಪತ್ನಿಯನ್ನು 25 ಬಾರಿ ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಆರೋಪಿಗೆ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಇತ್ತು. ಈ ವಿಚಾರ ತಿಳಿದ ಪತ್ನಿ ಕೋಪಗೊಂಡು ಪತಿಯನ್ನು ಸಾರ್ವಜನಿಕರ ಎದುರಲ್ಲೇ ದೂಷಿಸಿದ್ದಾಳೆ. ಇದರಿಂದ ಕೋಪಗೊಂಡ ಪತಿ ಸಾರ್ವಜನಿಕರ ಎದುರಲ್ಲೇ ಪತ್ನಿಯನ್ನು 25 ಬಾರಿ ಇರಿದು ಕೊಲೆ ಮಾಡಿದ್ದಾನೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ರಕ್ಷಿಸಲು ಯತ್ನಿಸಿದಾಗ ಅವರಿಗೆ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.