ಗೆಳೆಯನ ಪತ್ನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

ಶನಿವಾರ, 2 ಡಿಸೆಂಬರ್ 2023 (13:29 IST)
ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ, ನಿನ್ನೆ ರಾತ್ರಿ ನಾನು ಮನೆಯಲ್ಲಿ ಏಕಾಂಗಿಯಾಗಿದ್ದಾಗ ಮಾಜಿ ಪತಿಯ ನಾಲ್ಕು ಮಂದಿ ಗೆಳೆಯರು ಚಾಕೂವಿನಿಂದ ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ.

ನಗರದ  ಬಡಾವಣೆಯಲ್ಲಿ ಮಾಜಿ ಪತಿಯ ಗೆಳೆಯರು ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದಾರುಣ ಘಟನೆ ವರದಿಯಾಗಿದೆ.

ಅತ್ಯಾಚಾರವೆಸಗಿದ ಘಟನೆ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಮಹಿಳೆಗೆ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಅತ್ಯಾಚಾರಕ್ಕೊಳಗಾದ ಮಹಿಳೆ ಮೊದಲ ಪತಿ ಮತ್ತು ಇಬ್ಬರು ಮಕ್ಕಳನ್ನು 6 ತಿಂಗಳ ಹಿಂದೆ ತೊರೆದು ಅದೇ ಬಡಾವಣೆಯಲ್ಲಿ ಎರಡನೇ ಪತಿಯೊಂದಿಗೆ ವಾಸಿಸುತ್ತಿದ್ದಳು.
 
ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆ ಅತ್ಯಾಚಾರಕ್ಕೊಳಗಾಗಿರುವುದು ಸಾಬೀತಾಗಿದ್ದರಿಂದ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳು ಮಧ್ಯಪ್ರದೇಶದಲ್ಲಿರುವ ಬಗ್ಗೆ ಮೊಬೈಲ್ ಕರೆಗಳ ಮೂಲಕ ಪತ್ತೆಯಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ