ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ
35 ವರ್ಷದ ವ್ಯಕ್ತಿಯನ್ನು ಈ ಸಂಬಂಧ ಬಂಧಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಈತ ಸಣ್ಣ ಪುಟ್ಟ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇದೇ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಹಲವು ಬಾರಿ ಸ್ಕ್ರೂ ಡ್ರೈವರ್ ನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೇ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದರು. ಘಟನೆ ವೇಳೆ ಮಕ್ಕಳು ಅಮ್ಮನಿಗೆ ಸಹಾಯ ಮಾಡಲಾಗದೇ ತಂದೆಯ ಕ್ರೂರ ಕೃತ್ಯಕ್ಕೆ ಸಾಕ್ಷಿಯಾಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.