ವಿವಾಹೇತರ ಸಂಬಂಧ ವಿರೋಧಿಸಿದ ಗರ್ಭಿಣಿ ಪತ್ನಿಯನ್ನು ಕೊಂದ ಪತಿ

ಶನಿವಾರ, 13 ಫೆಬ್ರವರಿ 2021 (09:40 IST)
ಕಾನ್ಪುರ : ವಿವಾಹೇತರ ಸಂಬಂಧವನ್ನು ವಿರೋಧಿಸಿದಕ್ಕೆ ಒಂಬತ್ತು ತಿಂಗ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಈ ವಿಚಾರ ಪತ್ನಿಗೆ ತಿಳಿದುಬಂದಿದೆ. ಇದಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಹಿನ್ನಲೆಯಲ್ಲಿ ಪತಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಕರೆದುಕೊಂಡು ಹೋಗಿ ಇಟ್ಟಿಗೆಯಿಂದ ಹೊಡೆದು ಕೊಂದು ಶವವನ್ನು ಸುಟ್ಟು ಹಾಕಿದ್ದಾನೆ.

ಸುಟ್ಟ ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ