ಪುತ್ರನೆದುರೇ ಹೆಂಡತಿಯನ್ನು ಕೊಂದ ಗಂಡ
ಗಂಡ ಕೆಲವು ದಿನಗಳ ಹಿಂದೆ ಉದ್ಯೋಗ ಕಳೆದುಕೊಂಡಿದ್ದ. ಈ ವಿಚಾರವಾಗಿ ಗಂಡ-ಹೆಂಡತಿ ನಡುವೆ ಸದಾ ಜಗಳವಾಗುತ್ತಿತ್ತು. ಇದೇ ವಿಕೋಪಕ್ಕೆ ತಿರುಗಿ ಕೊಲೆ ಮಾಡಿರುವುದಾಗಿ ಗಂಡ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಇದೀಗ ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.