ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಶಂಕೆ: ಪತಿ ಮಾಡಿದ್ದೇನು ಗೊತ್ತಾ?!
ಸಂತ್ರಸ್ತ ಮಹಿಳೆ ಫ್ಯಾಕ್ಟರಿಯೊಂದರಲ್ಲಿ ನೌಕರಿಯಲ್ಲಿದ್ದಳು. ಅಲ್ಲಿಯೇ ಕೆಲಸ ಮಾಡುತ್ತಿದ್ದ ನೌಕರನೊಂದಿಗೆ ಆಕೆಗೆ ಅಕ್ರಮ ಸಂಬಂಧವಿದ್ದ ಬಗ್ಗೆ ಪತಿಗೆ ಶಂಕೆಯಿತ್ತು.
ಈ ಬಗ್ಗೆ ಪತ್ನಿಯನ್ನು ಪ್ರಶ್ನಿಸಿದ್ದ. ಈ ವೇಳೆ ಇಬ್ಬರ ನಡುವೆ ಕಲಹ ತಾರಕಕ್ಕೇರಿತ್ತು. ಈ ಸಂದರ್ಭದಲ್ಲಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತಿಯನ್ನು ಬಂಧಿಸಿದ್ದಾರೆ.