ಹೈದರಾಬಾದ್‌: ಅಪಾರ್ಟ್‌ಮೆಂಟ್‌ನ ಲಿಫ್ಟ್‌ಗೆ ಸಿಲುಕಿ ಒಂದು ವರ್ಷದ ಮಗು ಸಾವು

Sampriya

ಗುರುವಾರ, 13 ಮಾರ್ಚ್ 2025 (17:52 IST)
Photo Courtesy X
ಹೈದರಾಬಾದ್‌: ಅಪಾರ್ಟ್‌ಮೆಂಟ್‌ ಲಿಫ್ಟ್‌ನಲ್ಲಿ ಸಿಲುಕಿ ಒಂದು ವರ್ಷದ ಕಂದಮ್ಮ ಪ್ರಾಣಬಿಟ್ಟಿರುವ ಹೃದಯ ವಿದ್ರಾಹಕ ಘಟನೆ ಹೈದರಾಬಾದ್‌ನ ಸಂತೋಷ್ ನಗರ ಕಾಲೋನಿಯಲ್ಲಿ ನಡೆದಿದೆ.  ಈ ದುರ್ಘಟನೆಯಲ್ಲಿ ಒಂದು ವರ್ಷದ ಮಗು ಸುರೇಂದರ್ ಪ್ರಾಣ ಕಳೆದುಕೊಂಡಿದೆ.

ಸುರೇಂದರ್ ಅವರ ತಂದೆ ಹಾಸ್ಟೆಲ್‌ನಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು. ಅವರು ಕುತುಬ್ ಶಾಹಿ ಮಸೀದಿ ಬಳಿಯ ಮುಸ್ತಫಾ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಸಿಫ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗು ಅಪಘಾತದಲ್ಲಿ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿತು. ಪೊಲೀಸರು ಘಟನೆಯ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಈಚೆಗೆ ಸಿರ್ಸಿಲ್ಲಾ ಪಟ್ಟಣದ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಲಿಫ್ಟ್ ಶಾಫ್ಟ್‌ನಲ್ಲಿ ಬಿದ್ದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇತ್ತೀಚೆಗೆ ಪ್ರಾಣ ಕಳೆದುಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ