ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉರಿ ಪ್ರದೇಶದಲ್ಲಿ ಭಾರತೀಯ ಸೇನೆಯ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದರು. ನಮ್ಮ ನೆರೆಯ ರಾಷ್ಟ್ರವಾಗಿರುವ ಪಾಕಿಸ್ತಾನ ಸೌಹಾರ್ಧಯುತವಾಗಿ ನಡೆದುಕೊಳ್ಳಬೇಕು. ಭಾರತೀಯ ಸೈನಿಕರ ಮೇಲೆ ಪಾಕ್ ಪದೇ ಪದೇ ಉಗ್ರರ ಮೂಲಕ ದಾಳಿ ನಡೆಸುತ್ತಿದೆ. ಕಾಶ್ಮೀರದ ಉರಿ ಪ್ರದೇಶದಲ್ಲಿ ನಡೆದ ದಾಳಿ ಇದೇ ಮೊದಲ ದಾಳಿಯಲ್ಲ ಎಂದರು.
ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದು ಸರಿಯಲ್ಲ. ಪದೇ ಪದೇ ಇಂತಹ ದಾಳಿ ನಡೆಸುವ ಮೂಲಕ ಪಾಕಿಸ್ತಾನ, ಭಾರತ ದೇಶದ ಅಭಿವೃದ್ಧಿಗೆ ತೊಡಕುಂಟು ಮಾಡಲು ಪ್ರಯತ್ನಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಆಕ್ರೋಶ ವ್ಯಕ್ತಪಡಿಸಿದರು.