ಹೈಕಮಾಂಡ್ ಏನ್ ನಿರ್ಧಾರ ಕೈಗೊಂಡ್ರು ಪಾಲಿಸುತ್ತೇನೆ: ಸಿದ್ದರಾಮಯ್ಯ

Sampriya

ಗುರುವಾರ, 10 ಜುಲೈ 2025 (18:41 IST)
ನವದೆಹಲಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಸಿದ್ದರಾಮಯ್ಯ ಅವರು ಅಂತ್ಯ ಹಾಡಿದ್ದಾರೆ. 

ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಗಮನಿಸಿದ್ದಾರೆ. ಯಾವುದೇ ಚರ್ಚೆ ನಡೆದಿಲ್ಲ (ಮುಖ್ಯಮಂತ್ರಿ ಸ್ಥಾನ) ಅದೇ ನನ್ನ ಉತ್ತರ. ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಸ್ವತಃ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ನಾವಿಬ್ಬರೂ ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. 

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು  ಇಲ್ಲ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ